Politics

ಮತ್ತೆ ಸಿಎಂ ಆಗಲು ಸಿದ್ದರಾಮಯ್ಯ, ಕುಮಾರಸ್ವಾಮಿ ಹಗಲುಗನಸು ಕಾಣ್ತಿದ್ದಾರೆ..ಸಚಿವ ಈಶ್ವರಪ್ಪ ವ್ಯಂಗ್ಯ

Share

2023ಕ್ಕೆ ನಾನೇ ಸಿಎಂ ಎಂದು ಕುಮಾರಸ್ವಾಮಿ ಹೇಳುತ್ತಿದ್ದಾರೆ. ಇನ್ನು ಸಿದ್ದರಾಮಯ್ಯ ಮುಂದಿನ ಸಿಎಂ ನಾನೇ ಎಂದು ಸ್ವಯಂ ಘೋಷಿಸಿದ್ದಾರೆ. ಇದೇ ಮಾತನ್ನು ಅವರ ಪಕ್ಷದವರು ಯಾರಾದರೂ ಹೇಳಿದ್ದಾರಾ..? ಅವರಿಬ್ಬರೂ ಹಗಲು ಕನಸು ಕಾಣುತ್ತಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದ್ದಾರೆ.

ಮಡಿಕೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿರುವ ಸಚಿವ ಕೆ.ಎಸ್.ಈಶ್ವರಪ್ಪ ಈ ಜನ್ಮದಲ್ಲಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗುವುದಿಲ್ಲ. ಜೆಡಿಎಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ವ್ಯಂಗ್ಯವಾಡಿದರು. ಮುಖ್ಯಮಂತ್ರಿ ಬದಲಾವಣೆ ಎಂದು ಸುಮ್ಮನೆ ಮಾತನಾಡುತ್ತಾರೆ.

ಇದು ಕೇವಲ ಸೃಷ್ಟಿ ಮಾಡಿರುವುದು ಅμÉ್ಟ. ಕೇಂದ್ರ ನಾಯಕರು, ಶಾಸಕರು ಯಾರು ಹೇಳಿಲ್ಲ. ಇದನ್ನು ಹೇಳುತ್ತಿರುವುದು ಸಿದ್ದರಾಮಯ್ಯನವರು ಒಬ್ಬರೇ. ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ನಂತರ ಅವರಿಗೆ ಅದರ ಮೇಲೆ ಕಣ್ಣು. ಹಾಗಾಗಿ ಸ್ಥಾನ ಕಳೆದುಕೊಳ್ಳುತ್ತಾರೆ ಅಂತ ಹೇಳಿ ಅಭ್ಯಾಸ ಆಗಿದೆ ಎಂದು ಕುಟುಕಿದರು.

Tags:

error: Content is protected !!