Kagawad

ಕಾಗವಾಡ ತಾಲೂಕಿನ 8 ಗ್ರಾ.ಪಂ.ಗಳ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಘೋಷಣೆ

Share

ಕಾಗವಾಡ ತಾಲೂಕಿನ 8 ಗ್ರಾಮ ಪಂಚಾಯತಿಗಳ ಅಧ್ಯಕ್ಷ-ಉಪಾಧ್ಯಕ್ಷರ ಕ್ಯಾಟೆಗಿರಿ ಘೋಷಣೆ ಬೆಳಗಾವಿ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಹಿರಿಯ ಅಧಿಕಾರಿಗಳಾದ ಬಸವರಾಜ ಪಾಟೀಲ ಘೋಷಣೆ ಮಾಡಿದರು.

ಕಾಗವಾಡದ ಮಲ್ಲಿಕಾರ್ಜುನ ಸಭಾ ಭವನದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಕುಸನಾಳ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ‘ಅ’ ವರ್ಗ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಜುಗೂಳ ಅಧ್ಯಕ್ಷ ಸ್ಥಾನಕ್ಕೆ ‘ಅ’ ವರ್ಗ ಮಹಿಳೆ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಮೋಳೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಉಪಾಧ್ಯಕ್ಷ ಸ್ಥಾನಕ್ಕೆ ‘ಅ’ ವರ್ಗ, ಉಗಾರ ಬುದ್ರುಕ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದೂಳಿದ ಮಹಿಳೆ, ಮಂಗಸೂಳಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಶಿರಗುಪ್ಪಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ, ಕೃಷ್ಣಾ-ಕಿತ್ತೂರ ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಉಪಾಧ್ಯಕ್ಷ ಸ್ಥಾನಕ್ಕೆ ‘ಅ’ ವರ್ಗ ಮಹಿಳೆ, ಕೆಂಪವಾಡ ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮಹಿಳೆ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹೀಗೆ ಘೋಷಣೆ ಅಧಿಕಾರಿಗಳು ಮಾಡಿದರು.

ಬಳಿಕ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ, ಡಿಸಿ ಕಚೇರಿ ಹಿರಿಯ ಅಧಿಕಾರಿ ಬಸವರಾಜ್ ಪಾಟೀಲ್ ಮಾತನಾಡಿ ಹೆಚ್ಚಿನ ಮಾಹಿತಿ ನೀಡಿದರು.

ಎಲ್ಲ ಗ್ರಾಮ ಪಂಚಾಯತಿಗಳ ಚುನಾಯಿತ ಸದಸ್ಯರು, ಬೆಂಬಲಿಗಾರರು ಪಾಲ್ಗೊಂಡಿದ್ದರು. ಡಿವೈಎಸ್‍ಪಿ ಎಸ್.ವ್ಹಿ.ಗಿರೀಶ, ಸಿಪಿಐ ಶಂಕರಗೌಡಾ ಪಾಟೀಲ, ತಹಸೀಲ್ದಾರ ಪ್ರಮೀಳಾ ದೇಶಪಾಂಡೆ, ಇನ್ನೀತರ ಇಲಾಖೆ ಅಧಿಕಾರಿಗಳು ಕಾರ್ಯಕ್ರಮ ಯಶಸ್ವಿಗೊಳಿಸಿದರು. ಈ ವೇಳೆ ಅಥಣಿ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಶೀತಲ ಪಾಟೀಲ, ಶಿರಗುಪ್ಪಿಯ ನ್ಯಾಯವಾದಿಗಳಾದ ಅಭಯ ಅಕಿವಾಟೆ, ಶಿವಾನಂದ ಪಾಟೀಲ, ರಾಮಗೌಡಾ ಪಾಟೀಲ, ಅಣ್ಣಾಸಾಹೇಬ ಪಾಟೀಲ, ಸೇರಿದಂತೆ ಅನೇಕರು ಇದ್ದರು.

Tags:

error: Content is protected !!