ಮೆಟ್ರಿಕ್ ನಂತರದ ಎಸ್ಸಿ/ಎಸ್ಟಿ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವನ್ನು ಕರ್ನಾಟಕವೂ ಸೇರಿದಂತೆ ದೇಶದ 14 ರಾಜ್ಯಗಳಲ್ಲಿ ಬಂದ್ ಮಾಡಲಾಗಿದೆ.
ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದು, ಕೂಡಲೇ ವಿದ್ಯಾರ್ಥಿ ವೇತನ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಮ್ಯಕ್ ವಿದ್ಯಾರ್ಥಿ ಅಸೋಸಿಯೇಶನ್ ಮುಖಂಡರು, ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಸರಕಾರಕ್ಕೆ ಮನವಿ ಸಲ್ಲಿಸಿದರು
.
ಮೆಟ್ರಿಕ್ ನಂತರದ ಎಸ್ಸಿ/ಎಸ್ಟಿ ವಿದ್ಯಾರ್ಥಿಗಳಿಗೆ ಕೇಂದ್ರ ಮತ್ತು ರಾಜ್ಯ ಸರಕಾರದಿಂದ 60: 40 ಅನುಪಾತದಲ್ಲಿ ವಿದ್ಯಾರ್ಥಿ ವೇತನ ನೀಡಲಾಗುತ್ತಿತ್ತು. ಆದರೆ ಕೇಂದ್ರ ಸರಕಾರ ಕರ್ನಾಟಕವೂ ಸೇರಿದಂತೆ ದೇಶದ 14 ರಾಜ್ಯಗಳಲ್ಲಿ ವಿದ್ಯಾರ್ಥಿ ವೇತನ ನೀಡುವುದನ್ನು ಬಂದ್ ಮಾಡಿದೆ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದು, ಕೂಡಲೇ ಕೇಂದ್ರ ಮತ್ತು ರಾಜ್ಯದ 60:40 ಪದ್ಧತಿಯಲ್ಲಿ ವಿದ್ಯಾರ್ಥಿ ವೇತನ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಮ್ಯಕ್ ವಿದ್ಯಾರ್ಥಿ ಅಸೋಸಿಯೇಶನ್ ಮುಖಂಡರು, ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನಂತರ ಜಿಲ್ಲಾಧಿಕಾರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.
ಈ ವೇಳೆ ಸಮ್ಯಕ್ ವಿದ್ಯಾರ್ಥಿ ಅಸೋಸಿಯೇಶನ್ ವಿದ್ಯಾರ್ಥಿನಿ ಪ್ರಿಯಾಂಕಾ ಲಕ್ಕೋಳೆ ಮಾತನಾಡಿ, ಕೇಂದ್ರ ಸರಕಾರ ಏಕಾಏಕಿ ಮೆಟ್ರಿಕ್ ನಂತರದ ಎಸ್ಸಿ, ಎಸ್ ಟಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವುದನ್ನು ನಿಲ್ಲಿಸಿದೆ. ಇದರಿಂದ ಬಡ ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದು, ಕೂಡಲೇ ಸರಕಾರ ನಿಯಮಗಳಂತೆ ವೇತನ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ವೇಳೆ ಸಮ್ಯಕ್ ವಿದ್ಯಾರ್ಥಿ ಅಸೋಸಿಯೇಶನ್ ಮುಖಂಡರು, ಕಾರ್ಯಕರ್ತರು ಇದ್ದರು.